Temple Visit Ends in TragedyTemple Visit Ends in Tragedy

Temple Visit Ends in Tragedy: Car Overturns Near Siruguppa, Three Dead, ಸಿರುಗುಪ್ಪ ಬಳಿ ಕಾರು ಪಲ್ಟಿ: ತಮಿಳುನಾಡಿನ ದೇಗುಲ ದರ್ಶನಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ಮೃತ್ಯು

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾಗಿರಬಹುದೆಂದು ಶಂಕಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮೃತರನ್ನು ಪ್ರಸಾದ್ ರಾವ್, ಸಂದ್ಯಾ ಹಾಗೂ ವಿಜಯಾ ಎಂದು ಗುರುತಿಸಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

One thought on “Temple Visit Ends in Tragedy: Car Overturns Near Siruguppa, Three Dead”

Leave a Reply

Your email address will not be published. Required fields are marked *