BCCI Gives Jasprit Bumrah Extended Rest
BCCI Gives Jasprit Bumrah Extended Rest, To Return for T20 Series vs New Zealand, ಜನವರಿ 21ರವರೆಗೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11ರಿಂದ ಆರಂಭವಾಗಲಿದೆ. ಆದರೆ ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್ 2026 ಅನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
ಇತ್ತೀಚೆಗೆ ದೇಶೀಯ ಅಂಗಳದ ಏಕದಿನ ಟೂರ್ನಿಯಾದ ವಿಜಯ ಹಝಾರೆ ಟ್ರೋಫಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಸ್ಟಾರ್ ಆಟಗಾರರು ಭಾಗವಹಿಸುತ್ತಿದ್ದಾರೆ. ಆದರೆ ಜಸ್ಪ್ರೀತ್ ಬುಮ್ರಾ ಮಾತ್ರ ಈ ಬಾರಿ ಕೂಡ ಟೂರ್ನಿಯಲ್ಲಿ ಕಾಣಿಸಿಕೊಂಡಿಲ್ಲ. ಬಿಸಿಸಿಐ ಬುಮ್ರಾಗೆ ವಿಶ್ರಾಂತಿ ನೀಡಿರುವ ಕಾರಣ ಅವರನ್ನು ಆಯ್ಕೆ ಪರಿಗಣನೆಯಲ್ಲೇ ಸೇರಿಸಲಾಗಿಲ್ಲ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಅನಿಲ್ ಪಟೇಲ್ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಬುಮ್ರಾ, ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಆಡುತ್ತಾ ತಂಡಕ್ಕೆ ಮರಳಿದ್ದರು. ಇದೀಗ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಸಜ್ಜಾಗಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ನಂತರ ಐದು ಪಂದ್ಯಗಳ ಟಿ20 ಸರಣಿ ಆಯೋಜಿಸಲಾಗಿದೆ.
ಆದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಆಡದಿರುವುದು ಬಹುತೇಕ ಖಚಿತವಾಗಿದೆ. ಈ ಅವಧಿಯಲ್ಲಿ ಕೂಡ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಜನವರಿ 21ರಿಂದ ಆರಂಭವಾಗುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಬುಮ್ರಾ ಮತ್ತೆ ಟೀಮ್ ಇಂಡಿಯಾಗೆ ಸೇರ್ಪಡೆಯಾಗಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾದ ಪ್ರಮುಖ ವೇಗಿಯಾಗಿದ್ದಾರೆ. ಕಳೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲಿದ್ದರು. ನಿರಂತರವಾಗಿ ದೀರ್ಘಾವಧಿಯ ಪಂದ್ಯಗಳನ್ನು ಆಡುತ್ತಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಬುಮ್ರಾರನ್ನು ಪ್ರಮುಖ ಸರಣಿಗಳಲ್ಲಿ ಮಾತ್ರ ಕಣಕ್ಕಿಳಿಸಲು ಬಿಸಿಸಿಐ ನಿರ್ಧರಿಸಿದೆ. ಮುಂಬರುವ ಟಿ20 ವಿಶ್ವಕಪ್‌ಗೆ ಪೂರ್ಣ ಸಿದ್ಧತೆ ಕಲ್ಪಿಸುವ ಉದ್ದೇಶದಿಂದ, ವಿಜಯ ಹಝಾರೆ ಟ್ರೋಫಿ ಹಾಗೂ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಹೊರಗಿಡಲಾಗಿದೆ.
Pregnant Woman Killed Over Dowry in Rajasthan’s Dholpur, In-Laws Secretly Perform Last Rites, ವರದಕ್ಷಿಣೆಗಾಗಿ ನಾಲ್ಕು…
Monkeys Found Dead in Tumakuru Forest, Poisoning Suspected in Devarayanadurga, ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು:…
T20 World Cup 2026 Preparation: Lasith Malinga Joins Sri Lanka Team in New Role, T20…
Bigg Boss Kannada 12: Gilli Fans Troll Malu Nipanal on Stage, Video Goes Viral, ವೇದಿಕೆ…
Bengaluru New Year 2026: Traffic Curbs, Metro Closures and What’s Open, ಹೊಸ ವರ್ಷಾಚರಣೆ: ಬೆಂಗಳೂರು ಸೇರಿದಂತೆ…
Bangalore Metro New Rules: Loud Mobile Use, Reels and Eating Banned; Over 7,400 Cases Booked,…