Bengaluru New Year 2026Bengaluru New Year 2026

Bengaluru New Year 2026: Traffic Curbs, Metro Closures and What’s Open, ಹೊಸ ವರ್ಷಾಚರಣೆ: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಯಾವುದು ಬಂದ್? ಯಾವುದು ಓಪನ್? ಸಂಪೂರ್ಣ ವಿವರ

ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಹಲವು ಪ್ರವಾಸಿ ತಾಣಗಳು, ರಸ್ತೆ ಮತ್ತು ಮೆಟ್ರೋ ನಿಲ್ದಾಣಗಳಿಗೆ ನಿರ್ಬಂಧ ಹೇರಲಾಗಿದ್ದು, ಮತ್ತೊಂದೆಡೆ ಸಂಭ್ರಮಾಚರಣೆಗಾಗಿ ಸಾರ್ವಜನಿಕ ಸಾರಿಗೆ ಸೇವೆಗಳ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ವರ್ಷ ಸಂದರ್ಭದಲ್ಲಿ ಏನು ಇರಲಿದೆ, ಏನು ಇರದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಡಿಸೆಂಬರ್ 31:
ಹೊಸ ವರ್ಷಾಚರಣೆ (New Year 2026) ಹಿನ್ನೆಲೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಯಮಗಳು ಜಾರಿಗೆ ಬಂದಿವೆ. ಬೆಂಗಳೂರಿನಲ್ಲಿ ಕೆಲವು ಫ್ಲೈಓವರ್‌ಗಳು ಮತ್ತು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಬಿಎಂಟಿಸಿ ಬಸ್ ಹಾಗೂ ನಮ್ಮ ಮೆಟ್ರೋ ಸೇವೆಗಳನ್ನು ತಡರಾತ್ರಿ ವರೆಗೆ ವಿಸ್ತರಿಸಲಾಗಿದೆ.


ಹೊಸ ವರ್ಷಾಚರಣೆ: ಏನೇನಿರಲ್ಲ?

• ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ನಂದಿಗಿರಿಧಾಮಕ್ಕೆ ಡಿಸೆಂಬರ್ 31 ಮಧ್ಯಾಹ್ನ 2 ಗಂಟೆಯಿಂದ ಜನವರಿ 1 ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ.

• ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಿಗೆ ಡಿಸೆಂಬರ್ 31 ಸಂಜೆ 6 ರಿಂದ ಜನವರಿ 1 ಬೆಳಗ್ಗೆ 6 ಗಂಟೆಯವರೆಗೆ ಪ್ರವೇಶವಿಲ್ಲ.

• ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಹೊಸ ವರ್ಷ ಆಚರಣೆಗೆ ಮಧ್ಯರಾತ್ರಿ 12.30ರವರೆಗೆ ಮಾತ್ರ ಅನುಮತಿ. ಪಟಾಕಿ ಸಿಡಿಸುವುದಕ್ಕೆ ಸಂಪೂರ್ಣ ನಿಷೇಧ.

• ಕೊಡಗು ಜಿಲ್ಲೆಯಲ್ಲಿ ರಾತ್ರಿ 10 ಗಂಟೆಯ ನಂತರ ಹೊರಾಂಗಣ ಪಾರ್ಟಿಗೆ ಅವಕಾಶವಿಲ್ಲ; ಒಳಾಂಗಣ ಕಾರ್ಯಕ್ರಮಗಳಿಗೆ ಮಾತ್ರ ಅನುಮತಿ.

• ಬೆಂಗಳೂರಿನ ಚರ್ಚ್ ಸ್ಟ್ರೀಟ್ ಹಾಗೂ ಎಂಜಿ ರಸ್ತೆಯಲ್ಲಿ ಒಮ್ಮೆ ಹೊರಹೋದವರಿಗೆ ಮರುಪ್ರವೇಶಕ್ಕೆ ಅವಕಾಶವಿಲ್ಲ.

• ನಮ್ಮ ಮೆಟ್ರೋ ಎಂಜಿ ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳು ಬಂದ್.

• ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ಬಳಿಕ ಎಲ್ಲಾ ಪಾರ್ಕ್‌ಗಳು ಬಂದ್.

• ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ ಸಂಜೆಯ ನಂತರ ವಾಹನ ಸಂಚಾರಕ್ಕೆ ನಿರ್ಬಂಧ.


ಹೊಸ ವರ್ಷಾಚರಣೆ: ಏನೇನಿರುತ್ತೆ?

• ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ತಡರಾತ್ರಿ 2 ಗಂಟೆಯವರೆಗೆ ಮುಂದುವರಿಯಲಿದೆ.

• ನಮ್ಮ ಮೆಟ್ರೋ ರೈಲು ಸೇವೆ ಮುಂಜಾನೆ 3 ಗಂಟೆಯವರೆಗೆ ಲಭ್ಯ.

• ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳು ತಡರಾತ್ರಿ ವರೆಗೆ ಕಾರ್ಯಾಚರಣೆ ನಡೆಸಲಿವೆ.

• ಅಂಗಡಿಗಳು ಹಾಗೂ ವಾಣಿಜ್ಯ ಮಳಿಗೆಗಳಿಗೆ ರಾತ್ರಿ 1 ಗಂಟೆಯವರೆಗೆ ತೆರೆಯಲು ಅನುಮತಿ.

• ಕರಾವಳಿ ನಗರಗಳಾದ ಮಂಗಳೂರು ಮತ್ತು ಉಡುಪಿಗಳಲ್ಲಿ ಬೀಚ್ ಬದಿಯ ರೆಸಾರ್ಟ್‌ಗಳು ಹಾಗೂ ಹೋಮ್‌ಸ್ಟೇಗಳು ತೆರೆದಿರಲಿವೆ.

• ಮಂಗಳೂರು ನಗರದಲ್ಲಿ ಹೊಸ ವರ್ಷಾಚರಣೆ ರಾತ್ರಿ 12.30ರೊಳಗೆ ಪೂರ್ಣಗೊಳಿಸುವಂತೆ ಸೂಚನೆ.

Leave a Reply

Your email address will not be published. Required fields are marked *